PhotoGrid Site 1667284139944

ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಒಟ್ಟು ಹತ್ತು ಗಣ್ಯರು ಯಾರ್ಯಾರು ಗೊತ್ತಾ? ಇಲ್ಲಿದೆ ನೋಡಿ ಲಿಸ್ಟ್! ಯಾರಿಗೆಲ್ಲ ಸಿಕ್ಕೆದೆ ನೀವೇ ನೋಡಿ!!

ಸುದ್ದಿ

ಕರ್ನಾಟಕ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನದಂದು ಕನ್ನಡದಲ್ಲಿ ಕಲಾ ಸೇವೆ ಮಾಡಿದ ಕನ್ನಡಿಗರಿಗಾಗಿಯೇ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡುತ್ತಾ ಬಂದಿದೆ. ಈವರಿಗೆ ಸುಮಾರು 9 ಗಣ್ಯರಿಗೆ ಕರ್ನಾಟಕ ರತ್ನ ಪ್ರಶಸ್ತಿ ಲಭ್ಯವಾಗಿದೆ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಬಹಳ ವಿಶೇಷ ಯಾಕಂದರೆ ಹತ್ತನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ರಾಜಕುಮಾರ್ ಅವರ ಮುಡಿಗೇರಿಸಲಾಗಿದೆ.

ಅಪ್ಪು ಇಂದು ನಮ್ಮೊಂದಿಗಿಲ್ಲ ಆದರೆ ಅವರು ಮಾಡಿರುವ ಕಲಾ ಸೇವೆ ಸಾಧನೆ ಸಮಾಜ ಸೇವೆಗಳು ಅವರಿಗೆ ಸಾಕಷ್ಟು ಪ್ರಶಸ್ತಿ ಗೌರವಗಳನ್ನು ತಂದುಕೊಡುತ್ತಿದೆ ಇಲ್ಲದೆ ಇದ್ದರೂ ಕೂಡ ಇಂದು ಕರ್ನಾಟಕ ರತ್ನ ಪ್ರಶಸ್ತಿಯನ್ನು ಅವರಿಗೆ ನೀಡಿ ಗೌರವಿಸಲಾಗುತ್ತಿದೆ ಇದು ನಿಜಕ್ಕೂ ಹೆಮ್ಮೆಯ ವಿಷಯ. ಅದೇ ರೀತಿ ಪುನೀತ್ ಅವರು ನಮ್ಮೊಂದಿಗೆ ಎನ್ನುವ ದುಃಖವನ್ನು ಕೂಡ ನಾವು ಭರಿಸುವುದಕ್ಕೆ ಸಾಧ್ಯವೇ ಇಲ್ಲ.

ಅಂದಹಾಗೆ ಇಲ್ಲಿಯವರೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದವರು ಯಾರು ಯಾವಲ್ಲ ಗಣ್ಯರಿಗೆ ಈ ಪ್ರಶಸ್ತಿ ಪ್ರಧಾನ ಮಾಡಲಾಗಿದೆ ಅನ್ನುವುದನ್ನು ನೋಡೋಣ. ಕರ್ನಾಟಕ ರತ್ನ ಪ್ರಶಸ್ತಿ ಸ್ವೀಕರಿಸಿದವರ ಹೆಸರುಗಳನ್ನು ನೋಡುವುದಾದರೆ ಮೊದಲನೆಯದಾಗಿ ರಾಷ್ಟ್ರಕವಿ ಕುವೆಂಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಲಭ್ಯವಾಗಿದೆ ಅವರು ಸಾಹಿತ್ಯ ಲೋಕದಲ್ಲಿ ಮಾಡಿದ ಅಪಾರ ಸಾಧನೆ ಅವರಿಗೆ ಈ ಪ್ರಶಸ್ತಿಯನ್ನು ತಂದು ಕೊಟ್ಟಿತ್ತು.

ಅದೇ ರೀತಿ ಚಲನಚಿತ್ರದಲ್ಲಿ ಕಲಾ ಸೇವೆ ಮಾಡಿದ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ ಡಾಕ್ಟರ್ ರಾಜಕುಮಾರ್ ಅವರಿಗೂ ವಿಧಾನಸೌಧದ ಎದುರು ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿತ್ತು. ಹುಲಿಯ ಹೊಟ್ಟೆಯಲ್ಲಿ ಹುಲಿ ಹುಟ್ಟುತ್ತೆ ಎನ್ನುವ ಮಾತಿದೆ ಅದೇ ರೀತಿ ತಂದೆಯಂತೆಯೇ ಇಂದು ಮಗ ಕೂಡ ಇಂತಹ ಗೌರವಾನ್ವಿತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇನ್ನು ಮೂರನೆಯದಾಗಿ ರಾಜಕೀಯ ಕ್ಷೇತ್ರದಲ್ಲಿ ಸಾಧನೆಗೈದ ರಾಜಕೀಯ ಧುರೀಣ ನಿಜಲಿಂಗಪ್ಪ ಅವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. ಇನ್ನು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರೊಫೆಸರ್ ಸಿ ಎನ್ ಆರ್ ರಾವ್ ಅವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ನಂತರ ಮುಂದಿನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪಡೆದುಕೊಂಡವರು ಡಾಕ್ಟರ್ ದೇವಿ ಶೆಟ್ಟಿ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿತ್ತು.

ಇನ್ನು ಸಂಗೀತ ಮಾಂತ್ರಿಕ ಸಂಗೀತ ಲೋಕದಲ್ಲಿ ಅತ್ಯದ್ಭುತ ಸಾಧನೆಯನ್ನ ಮಾಡಿದ ಪಂಡಿತ ಭೀಮ್ ಸೇನ್ ಜೋಶಿ ಕೂಡ ಕರ್ನಾಟಕ ರತ್ನ ಪುರಸ್ಕೃತರು. ಸಮಾಜ ಸೇವೆಯಲ್ಲಿ ನಿರತರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿ, ಸಿದ್ದಗಂಗಾ ಮಠದ ಸ್ವಾಮೀಜಿಗಳಾಗಿದ್ದ ಇವರು ಸಾಕಷ್ಟು ಸಮಾಜ ಪರ ಕೆಲಸಗಳನ್ನು ಮಾಡಿದ್ದಾರೆ ಇವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಇನ್ನು ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆಗೈದಿರುವ ದೇ ಜವರೇಗೌಡ ಅವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ಲಭ್ಯವಾಗಿದೆ.

ಅದೇ ರೀತಿ ಸಮಾಜ ಸೇವೆಯಲ್ಲಿ ನಿರತರಾಗಿರುವ ದಕ್ಷಿಣ ಕನ್ನಡದಲ್ಲಿ ಹೆಚ್ಚು ಖ್ಯಾತಿಗಳಿಸಿರುವ ಡಾಕ್ಟರ್ ವೀರೇಂದ್ರ ಹೆಗ್ಗಡೆ ಅವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಇದೀಗ ನಮ್ಮ ನಿಮ್ಮೆಲ್ಲರ ಮೆಚ್ಚಿನ ನಟ, ಅತ್ಯದ್ಭುತ ಗಾಯಕ, ಅತ್ಯುತ್ತಮ ವ್ಯಕ್ತಿ, ನಗುವನ್ನು ಹಂಚುವ ಹೃದಯವಂತ ಪುನೀತ್ ರಾಜಕುಮಾರ್ ಅವರು ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಖಂಡಿತವಾಗಿಯೂ ಕನ್ನಡಿಗರಿಗೆ ಹೆಮ್ಮೆಯ ವಿಷಯ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಅವರ ಅಭಿಮಾನಿಗಳು ತುಂಬಾನೇ ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *